ಐರಾವತ ಯೋಜನೆ-ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು

 ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಲಘು ವಾಹನ ಚಾಲನಾ ಪರವಾನಗಿ ಹೊಂದಿರುವ ಪರಿಶಿಷ್ಟ ಜಾತಿಯ ನಿರುದ್ಯೋಗಿ ವಿಧ್ಯಾವಂತ ಯುವಕ / ಯುವತಿಯರಿಗೆ ಪ್ರವಾಸಿ ಟ್ಯಾಕ್ಸಿಗಳ ಮಾಲೀಕರನ್ನಾಗಿ ಮಾಡಿ “ಓಲಾ” / “ಉಬರ್” / “ಮೇರು” ಸಂಸ್ಥೆಗಳ ಸಹಯೋಗದಲ್ಲಿ ಅತಿ ಹೆಚ್ಚು ಆದಾಯ ಪಡೆಯುವ “ಐರಾವತ ಯೋಜನೆ” ಅನುಷ್ಟಾನಗೊಳಿಸಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯ ಅಂತರಾಷ್ಟ್ರೀಯ ಮಟ್ಟದ ಪ್ರವಾಸಿಗರ ತಾಣವಾಗಿದ್ದು, ಈ ಯೋಜನೆಗೆ ಹೆಚ್ಚನ ಬೇಡಿಕೆ ಇರುತ್ತದೆ.

ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈ ಯೋಜನೆಗೆ ಗರಿಷ್ಠ ರೂ. 5.00 ಲಕ್ಷಗಳವರೆಗೆ ನಿಗಮದಿಂದ ಸಹಾಯಧನ ಒದಗಿಸಲಾಗುವುದು. ಉಳಿದ ಭಾಗ ಬ್ಯಾಂಕ್/ಹಣಕಾಸು ಸಂಸ್ಥೆ/ಫಲಾನುಭವಿಯ ವಂತಿಕೆಯಿಂದ ಭರಿಸಿ ಯೋಜನೆಯನ್ನು ಅನುಷ್ಟಾನ ಮಾಡಲಾಗುವುದು.

ಆಯ್ಕೆಯಾದ ಫಲಾನುಭವಿಗಳಿದೆ “ಓಲಾ”/”ಉಬರ್”/”ಮೇರು” ಸಂಸ್ಥೆಗಳೊಂದಿಗೆ ಟೈ-ಅಪ್ ಮಾಡಿಕೊಂಡು ಬೇಡಿಕೆ ಇರುವ ಮುಖ್ಯ ನಗರ ಪ್ರದೇಶಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಇನ್ನಿತರೇ ಜಿಲ್ಲಾ ಕೇಂದ್ರಗಳಲ್ಲಿ ವಾಹನ ಚಾಲನೆ ಮಾಡಲು ವ್ಯವಸ್ಥೆ ಮಾಡಿ, ಯೋಜನೆಯನ್ನು ರೂಪಿಸಾಗಿದೆ.

Post a Comment

Previous Post Next Post