BPL Card: ರಾಜ್ಯದ ಬಿಪಿಎಲ್‌ ಕಾರ್ಡುದಾರರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸಚಿವ ಕೆ.ಎಚ್‌.ಮುನಿಯಪ್ಪ

 BPL Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಅದರಲ್ಲೂ ಈ ಪೈಕಿ ಬಿಪಿಎಲ್‌ ಕಾರ್ಡುದಾರರಿಗೆ ರಾಜ್ಯ ಸರ್ಕಾರ ಆಗಾಗ ಶುಭಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇವರಿಗೆ ಇದೀಗ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಮತ್ತೊಂದು ಭರ್ಜರಿ ಗುಡ್‌ ನ್ಯೂಸ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ ಅದೇನು ಎನ್ನು ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಬಿಪಿಲ್‌ ಪಡಿತರ ಚೀಟಿದಾರರಿಗೆ ಉಚಿತ ಹಾಗೂ ಕಡಿಮೆ ದರದಲ್ಲಿ ಆಹಾರ ಧಾನ್ಯವನ್ನು ಸರ್ಕಾರ ನೀಡುತ್ತಲೇ ಬಂದಿದೆ. ಆದರೆ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನಭಾಗ್ಯ ಯೋಜನೆಯಡಿಯಲ್ಲಿ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಮೊದಲಿಗೆ ಐದು ಕೆಜಿ ಅಕ್ಕಿ ಇನ್ನುಳಿದ ಐದು ಕೆಜಿ ಅಕ್ಕಿ ಬದಲಾಗಿ ಹಣವನ್ನು ಬ್ಯಾಂಕ್‌ ಖಾತೆಗೆ ಹಾಕಲಾಗುತ್ತಿತ್ತು, ಆದರೆ ಇದೀಗ 10 ಕೆಜಿ ಅಕ್ಕಿ ವಿತರಿಸುತ್ತಿದೆ.

ರಾಜ್ಯದ ಬಿಪಿಎಲ್ ಪಡಿತರಿಗೆ ಈಗಾಗಲೇ ಸರ್ಕಾರ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ. ಇದೀಗ ಇದರ ಜೊತೆಗೆ ಇನ್ಮುಂದೆ ಮುಂದೆ ಬೇಳೆ, ಎಣ್ಣೆಯನ್ನು ಕೂಡ ಕೊಡುವ ಚಿಂತನೆ ನಡೆಯುತ್ತಿದೆ ಎಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ಬಗ್ಗೆ ಹೇಳಿದರು. ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕಣೆ ಮಾಡಬೇಕಾಗಿದೆ. ಕೇಂದ್ರ ಸರ್ಕಾರ ಲಿಮಿಟ್ ಹೇರಿದೆ. ರಾಜ್ಯದಲ್ಲಿ 17 ಲಕ್ಷ ಹೆಚ್ಚುವರಿ ಕಾರ್ಡ್‌ಗೆ ಪಡಿತರ ನೀಡಲಾಗುತ್ತಿದೆ. ಅದನ್ನು ಹೆಚ್ಚು ಮಾಡಬೇಕೆಂದು ಮನವಿ ಮಾಡಿದ್ದೇವೆ. ಜೋಳ ಖರೀದಿಸಿ ಮೂರು ತಿಂಗಳು ಬಿಟ್ಟರೆ ಹುಳಾಗುತ್ತಿವೆ. ಆದ್ದರಿಂದ ಖರೀದಿಸಿದ ತಕ್ಷಣ ಹಂಚಿಕೆ ಮಾಡಲು ಹೇಳಿದ್ದೇನೆ ಎಂದರು. ಪಡಿತರರಿಗೆ ಇನ್ನುಮುಂದೆ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ಕೊಡುವ ಬಗ್ಗೆಯೂ ಚಿಂತನೆ ನಡೆದಿದೆ. ಕಾಳಸಂತೆಯಲ್ಲಿ ಪಡಿತರ ವಿಚಾರವಾಗಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಹೇಳಿದರು.
ಸಚಿವ ಕೆ.ಎನ್ ರಾಜಣ್ಣ ಸೆಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಕ್ರಾಂತಿ ಅಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಆಗಲ್ಲ ಎಂದರು. ಇನ್ನು ಸಿಎಂ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕೆಲಸವನ್ನ ಒಡೆಯರಿಗೆ ಹೋಲಿಸಿದ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಸರ್ಕಾರದಿಂದ ಖಡಕ್‌ ನಿರ್ಧಾರ: ಒಂದೇ ಮನೆಗೆ ಸೇರಿದವರು ವಿಭಿನ್ನ ಹೆಸರುಗಳಲ್ಲಿ ಎರಡು ರೇಷನ್ ಕಾರ್ಡ್ ಹೊಂದಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆ ಸರ್ಕಾರ ಇದೀಗ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಈ ಕುರಿತು ಪರಿಶೀಲನೆ ಪ್ರಾರಂಭ ಮಾಡಿದೆ. ಕೆಲವರು ಅನರ್ಹರು ಸಹ ಸಹ ಪಡಿತರ ಚೀಟಿಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಲಿದೆ. ಇದೀಗ ಸರ್ಕಾರ ಇಂತಹವರಿಗೆ ಕಡಿವಾಣ ಹಾಕಲು ಮುಂದಾಗಿದೆ. ಆರ್ಥಿಕವಾಗಿ ಸದೃಢರಾದರೂ ಕೂಡ ಪಡಿತರ ಚೀಟಿಗಳನ್ನು ಪಡೆದು ಸಬ್ಸಿಡಿ ಅಕ್ಕಿಯನ್ನು ಖಾಸಗಿ ಬಳಕೆ ಅಥವಾ ಮಾರುಕಟ್ಟೆಗೆ ಮಾರಾಟ ಮಾಡುತ್ತಿರುವ ಘಟನೆಗಳು ಕೂಡ ಇದೀಗ ಸರ್ಕಾರದ ಗಮನ ಸೆಳೆದಿವೆ. ಈ ಹಿನ್ನೆಲೆ ಫಲಾನುಭವಿಗಳಿಗೆ ನ್ಯಾಯ ದೊರಕಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

Post a Comment

Previous Post Next Post